Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:21 - ಕನ್ನಡ ಸಮಕಾಲಿಕ ಅನುವಾದ

21 “ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:21
19 ತಿಳಿವುಗಳ ಹೋಲಿಕೆ  

“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.


ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು,” ಎಂದರು.


ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.


ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ. ಅವರೆಲ್ಲರೂ ಪರಾಕ್ರಮಶಾಲಿಗಳೇ.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಈಗ ನೀವು ಈ ಜನರನ್ನೆಲ್ಲಾ ಕೊಂದುಹಾಕಿದರೆ, ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳು ನಿಮ್ಮ ವಿಷಯದಲ್ಲಿ,


ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.


ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.


‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ.


ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ,


ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”


ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು