Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಮೋಶೆ ಆರೋನರು ನೆಲದವರೆಗೆ ಬಾಗಿ, “ದೇವರೇ, ಎಲ್ಲಾ ಜನರ ಆಲೋಚನೆ ನಿನಗೆ ಗೊತ್ತಿದೆ. ದಯಮಾಡಿ ಎಲ್ಲಾ ಜನರ ಮೇಲೆ ಕೋಪಗೊಳ್ಳಬೇಡ. ನಿಜವಾಗಿ ಪಾಪಮಾಡಿದವನು ಕೇವಲ ಒಬ್ಬನಲ್ಲವೇ?” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:22
24 ತಿಳಿವುಗಳ ಹೋಲಿಕೆ  

“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ.


ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,


ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ ಎಲ್ಲಾ ಮನುಷ್ಯರ ಶ್ವಾಸವೂ ಇವೆ.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.


ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.


ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.


ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.


ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.


ಮೋಶೆಯು ಇದನ್ನು ಕೇಳಿದಾಗ, ಬೋರಲು ಬಿದ್ದು,


“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.


ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.


ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ನೀವು ಈಗ ಯೆಹೋವ ದೇವರ ಕಡೆಯಿಂದ ತಿರುಗಿ ಹೋಗುತ್ತೀರಲ್ಲಾ? “ ‘ಈ ಹೊತ್ತು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬಿದ್ದರೆ, ನಾಳೆ ಅವರು ಇಸ್ರಾಯೇಲ್ ಜನಾಂಗದ ಮೇಲೆ ರೌದ್ರವುಳ್ಳವರಾಗುವರು.


“ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ?


ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು.


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು