Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲ ನನ್ನ ಸ್ವಂತ ಆಲೋಚನೆಯಿಂದ ಆಗಲಿಲ್ಲ, ಸರ್ವೇಶ್ವರನೇ ಇವುಗಳನ್ನು ನಡೆಸುವುದಕ್ಕೆ ನನ್ನನ್ನು ಕಳಿಸಿದ್ದಾರೆಂದು ನೀವೇ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಮೋಶೆ ಜನರಿಗೆ - ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಇವುಗಳನ್ನು ನಡಿಸುವದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳುಕೊಳ್ಳುವದು ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಈ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:28
17 ತಿಳಿವುಗಳ ಹೋಲಿಕೆ  

ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


“ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.


“ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ,


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.


ನಾನು ತಂದೆಯಲ್ಲಿಯೂ ತಂದೆಯು ನನ್ನಲ್ಲಿಯೂ ಇದ್ದಾರೆಂದು ಹೇಳುವಾಗ ನೀವು ನನ್ನನ್ನು ನಂಬಿರಿ, ಇಲ್ಲದಿದ್ದರೆ ಆ ಕ್ರಿಯೆಗಳನ್ನಾದರೂ ನೀವು ನಂಬಿರಿ.


ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.


ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.


ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.


ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.


“ಫರೋಹನು ನಿಮಗೆ, ‘ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರಿ,’ ಎಂದಾಗ ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಫರೋಹನ ಮುಂದೆ ಬಿಸಾಡು,’ ಎಂದು ಹೇಳು, ಆಗ ಅದು ಸರ್ಪವಾಗುವುದು,” ಎಂದು ಹೇಳಿದರು.


‘ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ, ನನ್ನ ಹೃದಯದಿಂದ ಒಳ್ಳೆಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡುವುದಕ್ಕೆ ಯೆಹೋವ ದೇವರ ಆಜ್ಞೆಯನ್ನು ಮೀರಲಾರೆನು. ಯೆಹೋವ ದೇವರು ಏನು ಹೇಳುತ್ತಾರೋ, ಅದನ್ನೇ ಹೇಳುವೆನೆಂದು ನಾನು ಹೇಳಲಿಲ್ಲವೋ’? ಈಗ, ನನ್ನ ಜನರ ಬಳಿಗೆ ಹೋಗುತ್ತೇನೆ.


ಹಾಗಾದರೆ ಈಗ ಹೋಗು, ನಾನೇ ನಿನ್ನ ಸಂಗಡವಿದ್ದು, ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು,” ಎಂದರು.


ಅವನ ಸಂಗಡ ನೀನು ಮಾತನಾಡಿ, ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಂದಲೂ ಅವನ ಬಾಯಿಂದಲೂ ನಾನೇ ಮಾತನಾಡಿ ನೀವು ಮಾಡಬೇಕಾದುದನ್ನು ಕಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು