Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:3 - ಕನ್ನಡ ಸಮಕಾಲಿಕ ಅನುವಾದ

3 ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಆರೋನರ ಬಳಿಗೆ ಬಂದು ಅವರಿಗೆ - ನಿವ್ಮಿುಂದ ಸಾಕಾಯಿತು; ಈ ಸಮೂಹದವರಲ್ಲಿ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ; ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನಲ್ಲವೇ; ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವದೇನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:3
20 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.


ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ.’ ಇಸ್ರಾಯೇಲರಿಗೆ ನೀನು ಹೇಳಬೇಕಾದ ಮಾತುಗಳು ಇವೇ,” ಎಂದರು.


ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ, ಅವುಗಳ ಮೇಲೆ ಧೂಪವನ್ನು ಯೆಹೋವ ದೇವರ ಮುಂದೆ ಹಾಕಿರಿ. ಆಗ ಯೆಹೋವ ದೇವರು ಯಾವನನ್ನು ಆಯ್ದುಕೊಳ್ಳುವರೋ ಅವನೇ ಪರಿಶುದ್ಧನಾಗಿರುವನು. ಲೇವಿಯರೇ, ನೀವು ಬಹಳ ಮಿತಿಮೀರಿ ಹೋಗುತ್ತಿರುವಿರಿ,” ಎಂದನು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ.


ಇಸ್ರಾಯೇಲರು ತಮಗೂ, ತಮ್ಮ ಪುತ್ರರಿಗೂ ಅವರ ಪುತ್ರಿಯರನ್ನು ತೆಗೆದುಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ. ನಿಶ್ಚಯವಾಗಿ ಪ್ರಧಾನರು ಮತ್ತು ಅಧಿಕಾರಸ್ಥರು ಈ ಅಪನಂಬಿಗಸ್ತಿಕೆಗೆ ಮುಂದಾಳುಗಳಾದರು,” ಎಂದು ತಿಳಿಸಿದರು.


ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು.


ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.


ಸ್ತ್ರೀ ಪುರುಷವೆಂಬ ವ್ಯತ್ಯಾಸವಿಲ್ಲದೆ ಎಲ್ಲರನ್ನು ಹೊರಹಾಕಬೇಕು. ನಾನು ಅವರ ಮಧ್ಯದಲ್ಲಿ ವಾಸಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಪಾಳೆಯದ ಹೊರಗೆ ಕಳುಹಿಸಬೇಕು,” ಎಂಬುದೆ.


ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು