ಅರಣ್ಯಕಾಂಡ 16:38 - ಕನ್ನಡ ಸಮಕಾಲಿಕ ಅನುವಾದ38 ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿಪೀಠವನ್ನು ಮುಚ್ಚತಕ್ಕ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಏಕೆಂದರೆ ಅವುಗಳನ್ನು ಯೆಹೋವ ದೇವರ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಪ್ರಾಣವನ್ನು ಹೋಗಲಾಡಿಸಿಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾದವು; ಆದದರಿಂದ ಅವುಗಳನ್ನು ತಗಡುಗಳಾಗಿ ಹೊಡೆದು ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು; ಹಾಗೆ ಅವು ಇಸ್ರಾಯೇಲ್ಯರಿಗೆ ನೆನಪುಹುಟ್ಟಿಸುವವು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಪ್ರಾಣವನ್ನು ಕಳೆದುಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದ್ದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |