Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತರುವಾಯ ಯೆಹೋವನು ಮೋಶೆಗೆ - ಆರೋನನ ಕೋಲನ್ನು ತಿರಿಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು; ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡಬೇಕು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:10
23 ತಿಳಿವುಗಳ ಹೋಲಿಕೆ  

ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.


ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.


ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.


ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದೀರಿ.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿಪೀಠವನ್ನು ಮುಚ್ಚತಕ್ಕ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಏಕೆಂದರೆ ಅವುಗಳನ್ನು ಯೆಹೋವ ದೇವರ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು,” ಎಂದರು.


ಮೋಶೆಯು ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ: ‘ನಾನು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಡಿಸಿದಾಗ, ಮರುಭೂಮಿಯಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ್ ಮನ್ನವನ್ನು ತುಂಬಿಸಿ ಇಟ್ಟಿರಬೇಕು,’ ಎಂಬುದು,” ಎಂದನು.


ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ.


ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮನ್ನವನ್ನು ಸಂರಕ್ಷಿಸುವುದಕ್ಕೆ ಸಾಕ್ಷಿಯಾಗಿ ಇಟ್ಟನು.


ಅವುಗಳನ್ನು ದೇವದರ್ಶನ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಒಡಂಬಡಿಕೆಯ ಮಂಜೂಷದ ಮುಂದೆ ಇಡಬೇಕು.


ಆಗ ಮೋಶೆಯು ಕೋಲುಗಳನ್ನು ಯೆಹೋವ ದೇವರ ಸನ್ನಿಧಿಯಿಂದ ಎಲ್ಲಾ ಇಸ್ರಾಯೇಲರಿಗೆ ತೋರಿಸುವುದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು.


ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಮೋಶೆ ಮಾಡಿದನು.


ಆಗ ಮೋಶೆಯು ಯೆಹೋವ ದೇವರ ಸನ್ನಿಧಿಯಿಂದ ಹೊರಟು, ತನಗೆ ಆಜ್ಞಾಪಿಸಿದ ಹಾಗೆ ಕೋಲನ್ನು ತೆಗೆದುಕೊಂಡನು.


ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.


“ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.


ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.


“ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು