Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:12 - ಕನ್ನಡ ಸಮಕಾಲಿಕ ಅನುವಾದ

12 “ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಇಸ್ರಯೇಲರು ನನಗೆ ಸಮರ್ಪಿಸುವ ಪ್ರಥಮ ಫಲಗಳು, ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ, ಇವುಗಳಲ್ಲಿ ಶ್ರೇಷ್ಠವಾದುದು ನಿನಗೇ ಸಿಗಬೇಕೆಂದು ವಿಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸ್ರಾಯೇಲ್ಯರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಆಗಬೇಕೆಂದು ವಿಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ, ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:12
19 ತಿಳಿವುಗಳ ಹೋಲಿಕೆ  

ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ಪ್ರಥಮ ಫಲವನ್ನೂ, ನಿಮ್ಮ ಕುರಿಗಳ ಉಣ್ಣೆಯಲ್ಲಿ ಪ್ರಥಮವಾದದ್ದನ್ನೂ ಅವರಿಗೆ ಕೊಡಬೇಕು.


“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು,” ಎಂದು ಹೇಳಿದರು.


ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.


ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.


“ ‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯವನ್ನೂ ಹೊಸ ದ್ರಾಕ್ಷಾರಸವನ್ನೂ ಕೊಡಲಿ.


ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.


ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.


ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”


ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.


ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.


ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.


ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.


ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು