Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:15 - ಕನ್ನಡ ಸಮಕಾಲಿಕ ಅನುವಾದ

15 ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಮನುಷ್ಯರಲ್ಲೇ ಆಗಲಿ, ಪಶುಗಳಲ್ಲೇ ಆಗಲಿ, ಅವರು ನನಗೆ ಸಮರ್ಪಿಸುವ ಸಕಲ ಪ್ರಾಣಿಗಳಲ್ಲಿ ಚೊಚ್ಚಲಿನದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲುಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಮನುಷ್ಯರಲ್ಲಾಗಲಿ ಪ್ರಾಣಿಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:15
12 ತಿಳಿವುಗಳ ಹೋಲಿಕೆ  

ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.


ಇಸ್ರಾಯೇಲರ ಜೇಷ್ಠರಾದವರಲ್ಲಿ ಲೇವಿಯರಿಗಿಂತ ಹೆಚ್ಚಾಗಿರುವ 273 ಮಂದಿಯ ವಿಮೋಚನೆಯ ಕ್ರಯವಾಗಿ


ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ಫರೋಹನು ಹಟಮಾರಿತನದಿಂದ ನಮ್ಮನ್ನು ಕಳುಹಿಸದೆ ಇದ್ದಾಗ, ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಎಂದರೆ, ಮನುಷ್ಯರ ಹಾಗೂ ಪಶುಪ್ರಾಣಿಗಳ ಚೊಚ್ಚಲಾದವುಗಳನ್ನು ಕೊಂದುಹಾಕಿದರು. ಆದ್ದರಿಂದ ಚೊಚ್ಚಲ ಗಂಡುಗಳನ್ನೆಲ್ಲಾ ಯೆಹೋವ ದೇವರಿಗೆ ಅರ್ಪಿಸುತ್ತೇವೆ. ನಮ್ಮ ಪುತ್ರರಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇವೆ,’


ಅವು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ಗೇರಾ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ವಿಮೋಚಿಸಿಕೊಳ್ಳಬೇಕು.


ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು.


ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.


ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು