ಅರಣ್ಯಕಾಂಡ 18:17 - ಕನ್ನಡ ಸಮಕಾಲಿಕ ಅನುವಾದ17 “ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹಸುವಿನ ಮತ್ತು ಆಡುಕುರಿಗಳ ಚೊಚ್ಚಲು ಮರಿಗಳನ್ನು ಬಿಡಕೂಡದು. ಅವು ದೇವರ ಸೊತ್ತು. ಆದ್ದರಿಂದ ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸು; ಅವುಗಳ ಕೊಬ್ಬನ್ನು ಬಲಿಕಾಣಿಕೆಯಾಗಿ ದಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವದರಿಂದ ಅವುಗಳನ್ನು ಬಿಡಕೂಡದು; ಅವುಗಳ ರಕ್ತವನ್ನು ಯಜ್ಞವೇದಿಗೆ ಎರಚಿ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ. ಅಧ್ಯಾಯವನ್ನು ನೋಡಿ |