ಅರಣ್ಯಕಾಂಡ 18:19 - ಕನ್ನಡ ಸಮಕಾಲಿಕ ಅನುವಾದ19 ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರಿಗೂ ಸಲ್ಲಬೇಕು. ಸದಾಕಾಲಕ್ಕೂ ಇದನ್ನು ನಾನು ನಿನಗೆ ಅನುಗ್ರಹಿಸಿದ್ದೇನೆ. ಇದು ನನ್ನ ಸನ್ನಿಧಿಯಲ್ಲಿ ನಿನ್ನೊಡನೆ ಮತ್ತು ನಿನ್ನ ಸಂತತಿಯೊಡನೆ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇಸ್ರೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲವನ್ನು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ಪಾಲಾಗಿ ಅನುಗ್ರಹಿಸಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ನಂತರದ ಸಂತತಿಯವರೊಡನೆಯೂ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.” ಅಧ್ಯಾಯವನ್ನು ನೋಡಿ |