ಅರಣ್ಯಕಾಂಡ 18:20 - ಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರು ಆರೋನನಿಗೆ, “ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು, ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು. ನಾನೇ ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಪಾಲೂ ನಿನ್ನ ಸ್ವಾಸ್ತ್ಯವೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದಲ್ಲದೆ ಸರ್ವೇಶ್ವರ ಆರೋನನಿಗೆ ಹೀಗೆಂದರು: “ಇಸ್ರಯೇಲರ ನಾಡಿನಲ್ಲಿ ನಿನ್ನ ಸ್ವಂತ ಸೊತ್ತಾಗಿ ಯಾವ ಆಸ್ತಿಯೂ ಇರುವುದಿಲ್ಲ; ಅವರೊಂದಿಗೆ ನಿನಗೆ ಯಾವ ಪಾಲೂ ಇರುವುದಿಲ್ಲ. ಇಸ್ರಯೇಲರ ನಡುವೆ ನಾನೇ ನಿನಗೆ ಆಸ್ತಿಪಾಸ್ತಿ, ಪಾಲುಪಸುಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನಂದರೆ - ಇಸ್ರಾಯೇಲ್ಯರ ದೇಶದಲ್ಲಿ ನಿನಗೆ ಸ್ವಂತಕ್ಕಾಗಿ ಭೂಸ್ಥಿತಿ ಆಗುವದಿಲ್ಲ; ಅವರೊಂದಿಗೆ ನಿನಗೆ ಪಾಲು ಇರುವದಿಲ್ಲ. ಇಸ್ರಾಯೇಲ್ಯರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಸ್ವಾಸ್ತ್ಯವಾಗಿಯೂ ಇದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ. ಅಧ್ಯಾಯವನ್ನು ನೋಡಿ |