Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:21 - ಕನ್ನಡ ಸಮಕಾಲಿಕ ಅನುವಾದ

21 “ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇಗೋ, ಇಸ್ರಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಲೇವಿಯರಿಗೆ ಕೊಟ್ಟಿದ್ದೇನೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವ ಅವರಿಗೆ ಇದು ಸಲ್ಲತಕ್ಕ ಸಂಭಾವನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:21
26 ತಿಳಿವುಗಳ ಹೋಲಿಕೆ  

ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.


ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.


ನಿಜವಾಗಿಯೂ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಮೋಶೆಯ ನಿಯಮದಲ್ಲಿ ಅಪ್ಪಣೆಯಿದೆ.


ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ಹತ್ತರಲ್ಲೊಂದು ಪಾಲನ್ನು ಕೊಠಡಿಗಳಲ್ಲಿ ತಂದರು.


ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;


ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು, ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.


ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.


ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.


ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು.


ಅವನು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದರಲ್ಲಿ ಹಣದ ಪಾಲನ್ನು ಸ್ವೀಕರಿಸಿದ್ದರೂ, ಮಿಕ್ಕ ಲೇವಿಯರೊಡನೆ ಸಮಾನ ಪಾಲು ಹೊಂದಬೇಕು.


ಆದ್ದರಿಂದ ಜೆರುಬ್ಬಾಬೆಲನ ದಿವಸಗಳಲ್ಲಿಯೂ, ನೆಹೆಮೀಯನ ದಿವಸಗಳಲ್ಲಿಯೂ ಇಸ್ರಾಯೇಲರೆಲ್ಲರು ಹಾಡುಗಾರರಿಗೂ, ದ್ವಾರಪಾಲಕರಿಗೂ, ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಇತರ ಲೇವಿಯರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು ಮತ್ತು ಲೇವಿಯರು ಆರೋನನ ವಂಶಸ್ಥರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು.


ಲೇವಿಯರಿಗೂ, ಹಾಡುಗಾರರಿಗೂ, ದ್ವಾರಪಾಲಕರಿಗೂ ನೇಮಕವಾದ ಕಾಣಿಕೆಗಳನ್ನೂ, ಧೂಪವನ್ನೂ, ಸಾಮಗ್ರಿಗಳನ್ನೂ, ಧಾನ್ಯದ ಹತ್ತನೆಯ ಪಾಲುಗಳನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇಡುತ್ತಿದ್ದ ದೊಡ್ಡ ಕೊಠಡಿಯನ್ನು ಎಲ್ಯಾಷೀಬನು ಟೋಬೀಯನಿಗೋಸ್ಕರ ಸಿದ್ಧ ಮಾಡಿಕೊಟ್ಟಿದ್ದನು.


ನಾನು ಲೇವಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಮುಂದುವರಿಯುತ್ತದೆ. ಈ ಎಚ್ಚರಿಕೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳಿದುಕೊಳ್ಳಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.


ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.


“ಲೇವಿಯ ಗೋತ್ರವನ್ನು ಹತ್ತಿರ ಕರೆದು, ಯಾಜಕನಾದ ಆರೋನನ ಮುಂದೆ ನಿಲ್ಲಿಸು. ಅವರು ಅವನಿಗೆ ಸಹಾಯ ಮಾಡಲಿ.


ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು