Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೇವಿಯರೇ ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಬೇಕು; ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಆದರೆ ಇಸ್ರಾಯೇಲ್ಯರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯುಂಟಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:23
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು.


ಯೆಹೋವ ದೇವರು ಆರೋನನಿಗೆ, “ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು, ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು. ನಾನೇ ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಪಾಲೂ ನಿನ್ನ ಸ್ವಾಸ್ತ್ಯವೂ ಆಗಿದ್ದೇನೆ.


ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಇವರಲ್ಲಿ ಲೆಕ್ಕಿತರಾದವರು ಒಂದು ತಿಂಗಳೂ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 23,000 ಆಗಿತ್ತು. ಇವರಿಗೆ ಇಸ್ರಾಯೇಲರಲ್ಲಿ ಸೊತ್ತು ದೊರೆಯದ ಕಾರಣ ಅವರು ಇಸ್ರಾಯೇಲರೊಳಗೆ ಲೆಕ್ಕಿತರಾಗಲಿಲ್ಲ.


“ ‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು.


ಇದು ಅವರಿಗೆ ಶಾಶ್ವತ ಕಟ್ಟಳೆಯಾಗಿರಬೇಕು. “ಶುದ್ಧೀಕರಣದ ನೀರನ್ನು ಚಿಮುಕಿಸುವವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಂಜೆಯವರೆಗೆ ಅಪವಿತ್ರನಾಗಿರುವನು.


“ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.


ಆದ್ದರಿಂದ ಲೇವಿಯರಿಗೆ ಅವರ ಸಹೋದರರ ಸಂಗಡ ಸ್ವಂತವಾದ ಭೂಸ್ವಾಸ್ತ್ಯವು ದೊರೆಯಲಿಲ್ಲ. ನಿಮ್ಮ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದಂತೆ ಯೆಹೋವ ದೇವರೇ ಅವರ ಸೊತ್ತು.


ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು