Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:32 - ಕನ್ನಡ ಸಮಕಾಲಿಕ ಅನುವಾದ

32 ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದರಲ್ಲಿ ಉತ್ತಮಭಾಗವನ್ನು ಸರ್ವೇಶ್ವರನಿಗೆ ಮೀಸಲಾಗಿಟ್ಟ ನಂತರ ಮಿಕ್ಕದ್ದನ್ನು ಊಟಮಾಡುವುದರಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಯೇಲರು ಸಮರ್ಪಿಸುವ ಪವಿತ್ರ ವಸ್ತುಗಳನ್ನು ಅಪವಿತ್ರಗೊಳಿಸಬೇಡಿ; ಇಲ್ಲವಾದರೆ ಸಾಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ವಿುಕ್ಕದರ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವದಿಲ್ಲ. ಇಸ್ರಾಯೇಲ್ಯರು ಸಮರ್ಪಿಸುವ ದೇವರ ವಸ್ತುಗಳನ್ನು ಸಾಧಾರಣವೆಂದೆಣಿಸಿ ಸಾಯಬೇಡಿರಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:32
10 ತಿಳಿವುಗಳ ಹೋಲಿಕೆ  

ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.


“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡು, ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡದಂತೆ ಇಸ್ರಾಯೇಲರು ನನಗೆ ಸಲ್ಲಿಸುವ ಪರಿಶುದ್ಧವಾದವುಗಳನ್ನು ಗೌರವದಿಂದ ಅವರು ಪ್ರತ್ಯೇಕವಾಗಿರಿಸಬೇಕು. ನಾನೇ ಯೆಹೋವ ದೇವರು.


ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು.


ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು.


“ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!


ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.


ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಏಕೆಂದರೆ ದೇವದರ್ಶನದ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ಅದು ನಿಮಗೆ ಪ್ರತಿಫಲವಾಗಿದೆ.


ಯೆಹೋವ ದೇವರು ಮೋಶೆ ಹಾಗೂ ಆರೋನನ ಸಂಗಡ ಮಾತನಾಡಿ,


ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು