Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:4 - ಕನ್ನಡ ಸಮಕಾಲಿಕ ಅನುವಾದ

4 ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ನಿಮ್ಮ ಜೊತೆ ಸೇರಿ ದೇವದರ್ಶನದ ಗುಡಾರವನ್ನು ನೋಡಿಕೊಳ್ಳಲಿ; ಅದರ ಎಲ್ಲ ಪರಿಚರ್ಯವನ್ನು ಮಾಡಲಿ. ಇತರ ಕುಲದವರ ಜೊತೆ ನಿಮಗೆ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಪರಿಚರ್ಯವನ್ನು ಮಾಡಬೇಕು; ಇತರ ಕುಲದವರು ನಿಮ್ಮ ಜೊತೆಯಲ್ಲಿರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ದೇವದರ್ಶನಗುಡಾರವನ್ನು ಕಾಯಬೇಕು ಮತ್ತು ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಬೇಕು. ಬೇರೆ ಯಾರೂ ನಿನ್ನೊಂದಿಗೆ ಭಾಗಿಗಳಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:4
10 ತಿಳಿವುಗಳ ಹೋಲಿಕೆ  

ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.


ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”


ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.


ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ.


“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.


ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.


ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆಗೋಸ್ಕರವೂ ಅದರಲ್ಲಿ ಮಾಡುವಂತಹ ಎಲ್ಲವುಗಳಿಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿಕೊಳ್ಳುವವರನ್ನಾಗಿ ಮಾಡುವೆನು.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು