Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:5 - ಕನ್ನಡ ಸಮಕಾಲಿಕ ಅನುವಾದ

5 “ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇನ್ನು ಮುಂದೆ ಇಸ್ರಾಯೇಲ್ಯರ ಮೇಲೆ ದೇವರ ಕೋಪವುಂಟಾಗದಂತೆ ನೀವೇ ದೇವಸ್ಥಾನದ ಸಾಮಾನನ್ನೂ ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:5
25 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.


ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.


ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.


ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.


ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.


“ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”


ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.


ಇದಲ್ಲದೆ ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು, ಸ್ವತಂತ್ರವಾದ ಕೊಠಡಿಗಳಲ್ಲಿ ವಾಸವಾಗಿದ್ದರು. ಏಕೆಂದರೆ ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.


ಹೀಗೆಯೇ ಅವರಿಗೂ, ಅವರ ಮಕ್ಕಳಿಗೂ ಯೆಹೋವ ದೇವರ ಮನೆಯ ಬಾಗಿಲು ಕಾವಲಿತ್ತು. ಅದು ದೇವದರ್ಶನ ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರರಿಂದ ಕಾಯಬೇಕಾಗಿತ್ತು.


ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು.


ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”


“ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.”


ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು.


ಇವರು ಮಾತ್ರ ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ಇವರು ಮಾತ್ರ ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಮತ್ತು ನನಗೆ ಕಾವಲುಗಾರರಾಗಿ ಸೇವೆ ಸಲ್ಲಿಸಬೇಕು.


ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.


“ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.


ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಪುತ್ರರಾಗಿದ್ದರು. ತಮ್ಮ ಹೆಸರುಗಳಿಂದ, ಎಣಿಕೆಯಾಗಿದ್ದ ಇವರು ತಮ್ಮ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು. ಇವರು ಇಪ್ಪತ್ತು ವರ್ಷ ಪ್ರಾಯದವರು ಮೊದಲುಗೊಂಡು, ಯೆಹೋವ ದೇವರ ಮನೆಯ ಸೇವೆಗೋಸ್ಕರ ಕೆಲಸಮಾಡಿದರು.


ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.


“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು