ಅರಣ್ಯಕಾಂಡ 18:8 - ಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಮಾತನಾಡಿ ಆರೋನನಿಗೆ, “ನನಗೆ ಕೊಡುವ ಎಲ್ಲಾ ಕಾಣಿಕೆಗಳ ಮೇಲೆ ನಿನ್ನನ್ನು ನೇಮಿಸಿದ್ದೇನೆ. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಪರಿಶುದ್ಧವಾದ ಕಾಣಿಕೆಗಳನ್ನೆಲ್ಲಾ ನಿನಗೂ ನಿನ್ನ ಮಕ್ಕಳಿಗೂ ಶಾಶ್ವತ ಪಾಲನ್ನು ನೀಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನಂದರೆ - ಇಸ್ರಾಯೇಲ್ಯರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಅಂದರೆ ದೇವರ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವದಕ್ಕೆ ದಾನಮಾಡಿದ್ದೇನೆ; ಅವು ಸದಾಕಾಲವೂ ನಿಮಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ. ಅಧ್ಯಾಯವನ್ನು ನೋಡಿ |