Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:9 - ಕನ್ನಡ ಸಮಕಾಲಿಕ ಅನುವಾದ

9 ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಗ್ನಿಯಲ್ಲಿ ದಹನಮಾಡದೆ ಉಳಿಸುವ ಮಹಾಪರಿಶುದ್ಧ ಪದಾರ್ಥಗಳೆಲ್ಲ ಅಂದರೆ ಇಸ್ರಯೇಲರು ನನಗೆ ಸಮರ್ಪಿಸುವ ಎಲ್ಲ ಧಾನ್ಯ ದ್ರವ್ಯ, ನೈವೇದ್ಯ ದ್ರವ್ಯ, ಪಾಪ ಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿಕಾಣಿಕೆ, ಇವುಗಳಲ್ಲಿ ದಹನವಾಗದೆ ಉಳಿದ ಭಾಗಗಳು ಮಹಾಪರಿಶುದ್ಧವಾದುವುಗಳು. ಅವು ನಿನಗೂ ನಿನ್ನ ಸಂತತಿಯವರಿಗೂ ಸಲ್ಲತಕ್ಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳೆಲ್ಲಾ ಅಂದರೆ ಇಸ್ರಾಯೇಲ್ಯರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯನೈವೇದ್ಯ ದ್ರವ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞದ್ರವ್ಯ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:9
24 ತಿಳಿವುಗಳ ಹೋಲಿಕೆ  

“ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.


ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು.


“ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


“ಅದು ಮಹಾಪರಿಶುದ್ಧವಾದ್ದರಿಂದಲೂ ಯೆಹೋವ ಸನ್ನಿಧಿಯಲ್ಲಿ ಅವರಿಗಾಗಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿಯೂ ನೀವು ಸಭೆಯ ಅಪರಾಧವನ್ನು ಹೊರುವುದಕ್ಕಾಗಿ ದೇವರು ಅದನ್ನು ಕೊಟ್ಟಿದ್ದೆಂದೂ ನೀವು ತಿಳಿದು ಪಾಪ ಪರಿಹಾರದ ಬಲಿಯನ್ನು ಪರಿಶುದ್ಧವಾದ ಸ್ಥಳದಲ್ಲಿ ಏಕೆ ತಿನ್ನಲಿಲ್ಲ?


“ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.


ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


“ ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.


ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.


ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.


ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಮಹಾಪರಿಶುದ್ಧ ಸ್ಥಳದಲ್ಲಿ ನೀನು ಅದನ್ನು ತಿನ್ನಬೇಕು. ಪುರುಷರು ಅದನ್ನು ತಿನ್ನಬಹುದು. ಅದು ನಿನಗೆ ಪರಿಶುದ್ಧವಾಗಿರುವುದೆಂದು ಪರಿಗಣಿಸಬೇಕು.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.


ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,


ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ.


ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು.


ಯಾಜಕರಾದ ಲೇವಿಯರಿಗೂ, ಆ ಎಲ್ಲಾ ಲೇವಿಯ ಗೋತ್ರಕ್ಕೂ, ಇಸ್ರಾಯೇಲಿನ ಸಂಗಡ ಪಾಲೂ ಸೊತ್ತೂ ಇರಬಾರದು. ಅವರು ಯೆಹೋವ ದೇವರಿಗೆ ಸಮರ್ಪಿಸಿದ ದಹನಬಲಿಯ ಕಾಣಿಕೆಗಳ ಮೇಲೆ ಆಧಾರಮಾಡಿಕೊಂಡು ಜೀವಿಸಬೇಕು. ಅದು ಅವರ ಬಾಧ್ಯತೆಯಾಗಿದೆ.


ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.


ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು