Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:17 - ಕನ್ನಡ ಸಮಕಾಲಿಕ ಅನುವಾದ

17 “ಅಪವಿತ್ರನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯನ್ನು ತೆಗೆದುಕೊಂಡು, ಒಂದು ಪಾತ್ರೆಯೊಳಗಿಟ್ಟು, ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಅಂಥ ಮಡಿಗೆಟ್ಟವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿಟ್ಟು ಅದರ ಮೇಲೆ ಹರಿಯುವ ನೀರನ್ನು ಹುಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅಂಥ ಅಶುದ್ಧನಾದವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು ಅದರ ಮೇಲೆ ಸೆಲೇನೀರನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆದ್ದರಿಂದ ಅಶುದ್ಧ ವ್ಯಕ್ತಿಯನ್ನು ಶುದ್ಧೀಕರಿಸುವುದಕ್ಕಾಗಿ ಶುದ್ಧೀಕರಣ ಯಜ್ಞದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ತೆಗೆದುಕೊಂಡು ಹರಿಯುವ ನೀರನ್ನು ಅದರ ಮೇಲೆ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:17
11 ತಿಳಿವುಗಳ ಹೋಲಿಕೆ  

ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.


ನೀನು ತೋಟದ ಬುಗ್ಗೆಯೂ ಉಕ್ಕಿಬರುವ ಒರತೆಯೂ ಲೆಬನೋನಿನಿಂದ ಹರಿಯುವ ಹೊಳೆಯೂ ಆಗಿರುವೆ.


“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.


ಇಸಾಕನ ಸೇವಕರು ತಗ್ಗಿನಲ್ಲಿ ಅಗೆದಾಗ, ಅಲ್ಲಿ ಅವರಿಗೆ ಉಕ್ಕುವ ಒರತೆಯ ಬಾವಿಯು ಸಿಕ್ಕಿತು.


ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು.


ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.


ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು