ಅರಣ್ಯಕಾಂಡ 19:18 - ಕನ್ನಡ ಸಮಕಾಲಿಕ ಅನುವಾದ18 ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್‍ಗಿಡದ ಬರಲಿಂದ [ಮನುಷ್ಯನು ಸತ್ತ] ಆ ಡೇರೆಯ ಮೇಲೂ ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೂ ಚಿವಿುಕಿಸಬೇಕು; ಹಾಗೆಯೇ ಎಲುಬಾಗಲಿ ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ ಸಮಾಧಿಯಾಗಲಿ ಯಾವನಿಗೆ ಸೋಂಕಿತೋ ಅವನ ಮೇಲೆಯೂ ಚಿವಿುಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು. ಅಧ್ಯಾಯವನ್ನು ನೋಡಿ |