ಅರಣ್ಯಕಾಂಡ 19:2 - ಕನ್ನಡ ಸಮಕಾಲಿಕ ಅನುವಾದ2 “ಯೆಹೋವ ದೇವರಾದ ನಾನು ಆಜ್ಞಾಪಿಸಿದ ನಿಯಮದ ಕಟ್ಟಳೆ ಏನೆಂದರೆ, ಎಂದೂ ನೊಗವನ್ನು ಹೊರದಂಥ, ಮಚ್ಚೆ ಇಲ್ಲದಂಥ ಮತ್ತು ಕಳಂಕವಿಲ್ಲದ ಕೆಂದಾಕಳನ್ನು ನಿಮಗೆ ತಂದು ಕೊಡುವಂತೆ ಇಸ್ರಾಯೇಲರಿಗೆ ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಸರ್ವೇಶ್ವರನಾದ ನಾನು ಒಂದು ವಿಧಿಯನ್ನು ನೇಮಿಸಿದ್ದೇನೆ. ಅದೇನೆಂದರೆ - ಎಂದೂ ನೊಗವನ್ನು ಹೊರದ ಹಾಗೂ ಯಾವ ಕುಂದುಕೊರತೆಯೂ ಇಲ್ಲದ ಒಂದು ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಯೇಲರಿಗೆ ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನಾದ ನಾನು ಒಂದು ವಿಧಿಯನ್ನು ನೇವಿುಸಿದ್ದೇನೆ; ಅದೇನಂದರೆ - ಎಂದೂ ನೊಗವನ್ನು ಹೊರದ ಮತ್ತು ಯಾವ ಕುಂದು ಕೊರತೆಯೂ ಇಲ್ಲದ ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೆಹೋವನು ಆಜ್ಞಾಪಿಸಿದ ಸಂಪ್ರದಾಯದ ನಿಯಮವಿದು. ಯಾವ ದೋಷವಿಲ್ಲದ ಕೆಂಪು ಹಸುವನ್ನು ನಿನಗೆ ತಂದುಕೊಡುವಂತೆ ಇಸ್ರೇಲರಿಗೆ ಹೇಳು. ಆ ಹಸುವಿನಲ್ಲಿ ಯಾವ ಗಾಯಗಳಿರಬಾರದು ಮತ್ತು ಆ ಹಸುವು ಎಂದಿಗೂ ನೊಗವನ್ನು ಹೊತ್ತಿರಬಾರದು. ಅಧ್ಯಾಯವನ್ನು ನೋಡಿ |