Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:21 - ಕನ್ನಡ ಸಮಕಾಲಿಕ ಅನುವಾದ

21 ಇದು ಅವರಿಗೆ ಶಾಶ್ವತ ಕಟ್ಟಳೆಯಾಗಿರಬೇಕು. “ಶುದ್ಧೀಕರಣದ ನೀರನ್ನು ಚಿಮುಕಿಸುವವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಂಜೆಯವರೆಗೆ ಅಪವಿತ್ರನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇದು ಇಸ್ರಯೇಲರಿಗೆ ಶಾಶ್ವತ ನಿಯಮವಾಗಿರುತ್ತದೆ. ಮೈಲಿಗೆ ನೀಗಿಸುವ ಆ ನೀರನ್ನು ಚಿಮುಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಆ ನೀರನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೂ ಮಡಿಗೆಟ್ಟವನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದು ಇಸ್ರಾಯೇಲ್ಯರಿಗೆ ಶಾಶ್ವತನಿಯಮ. ಹೊಲೆಗಳೆವ ಆ ನೀರನ್ನು ಚಿವಿುಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಮತ್ತು ಆ ನೀರು ಯಾರಿಗೆ ಸೋಂಕಿತೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದು ನಿಮಗೆ ಶಾಶ್ವತನಿಯಮ. ಶುದ್ಧಪಡಿಸುವ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಮತ್ತು ಆ ನೀರನ್ನು ಯಾವನಾದರೂ ಮುಟ್ಟಿದರೆ, ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:21
12 ತಿಳಿವುಗಳ ಹೋಲಿಕೆ  

ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.


ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.


ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಆಗ ಯಾಜಕನು ತನ್ನ ವಸ್ತ್ರಗಳನ್ನು ತೊಳೆದುಕೊಂಡು, ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಗೆ ಬರಬಹುದು. ಆದರೂ ಯಾಜಕನು ಸಂಜೆಯವರೆಗೂ ಅಶುದ್ಧನಾಗಿರುವನು.


ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.


ಅದನ್ನು ಸುಡುವವನು ತನ್ನ ವಸ್ತ್ರಗಳನ್ನು ನೀರಿನಲ್ಲಿ ತೊಳೆದುಕೊಂಡು, ಸ್ನಾನಮಾಡಬೇಕು. ಅವನೂ ಸಹ ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.


ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು, ಸಂಜೆಯವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಶಾಶ್ವತ ಕಟ್ಟಳೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು