Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:8 - ಕನ್ನಡ ಸಮಕಾಲಿಕ ಅನುವಾದ

8 ಅದನ್ನು ಸುಡುವವನು ತನ್ನ ವಸ್ತ್ರಗಳನ್ನು ನೀರಿನಲ್ಲಿ ತೊಳೆದುಕೊಂಡು, ಸ್ನಾನಮಾಡಬೇಕು. ಅವನೂ ಸಹ ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಆಕಳನ್ನು ಸುಟ್ಟವನು ಕೂಡ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನ ಮಾಡಿ ಆ ದಿನದ ಸಂಜೆಯ ತನಕ ಮಡಿಗೆಟ್ಟವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಹಸುವನ್ನು ಸುಟ್ಟು ಹಾಕಿದವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿಕೊಳ್ಳಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:8
6 ತಿಳಿವುಗಳ ಹೋಲಿಕೆ  

ಅವುಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ನಂತರ ಪಾಳೆಯದೊಳಕ್ಕೆ ಬರಬೇಕು.


ಆಗ ಯಾಜಕನು ತನ್ನ ವಸ್ತ್ರಗಳನ್ನು ತೊಳೆದುಕೊಂಡು, ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಗೆ ಬರಬಹುದು. ಆದರೂ ಯಾಜಕನು ಸಂಜೆಯವರೆಗೂ ಅಶುದ್ಧನಾಗಿರುವನು.


“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.


ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.


“ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.


ಇದು ಅವರಿಗೆ ಶಾಶ್ವತ ಕಟ್ಟಳೆಯಾಗಿರಬೇಕು. “ಶುದ್ಧೀಕರಣದ ನೀರನ್ನು ಚಿಮುಕಿಸುವವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಂಜೆಯವರೆಗೆ ಅಪವಿತ್ರನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು