ಅರಣ್ಯಕಾಂಡ 2:17 - ಕನ್ನಡ ಸಮಕಾಲಿಕ ಅನುವಾದ17 ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅನಂತರ ಸೈನ್ಯಗಳ ನಟ್ಟನಡುವೆಯಲ್ಲಿ ದೇವದರ್ಶನದ ಗುಡಾರವೂ ಲೇವಿಯರ ಪಾಳೆಯದವರೂ ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಇಸ್ರೇಲರು ಪ್ರಯಾಣಮಾಡುವಾಗ ಅವರ ನಂತರ ಹೊರಡುವ ತಂಡದವರೇ ಲೇವಿ ಕುಲದವರು. ಇತರ ಪಾಳೆಯಗಳ ಮಧ್ಯೆ ದೇವದರ್ಶನಗುಡಾರವು ಅವರೊಡನೆ ಇರುವುದು. ಅವರು ತಾವು ಪಾಳೆಯ ಮಾಡಿಕೊಂಡ ಕ್ರಮಾನುಸಾರವಾಗಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು. ಅಧ್ಯಾಯವನ್ನು ನೋಡಿ |