Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:18 - ಕನ್ನಡ ಸಮಕಾಲಿಕ ಅನುವಾದ

18 ಎಫ್ರಾಯೀಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವುದು: ಎಫ್ರಾಯೀಮನ ಮಕ್ಕಳಿಗೆ ಅಮ್ಮೀಹೂದನ ಮಗ ಎಲೀಷಾಮಾನು ಸೈನ್ಯಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪಶ್ಚಿಮದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಎಫ್ರಾಯೀಮ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳವರು ದೇವದರ್ಶನಗುಡಾರದ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ಎಫ್ರಾಯೀಮ್ ಕುಲದವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:18
13 ತಿಳಿವುಗಳ ಹೋಲಿಕೆ  

ಎಫ್ರಾಯೀಮನ ಪಾಳೆಯದ ಧ್ವಜವು ಅವನ ಸೈನ್ಯಗಳ ಪ್ರಕಾರ ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀಹೂದನ ಮಗ ಎಲೀಷಾಮನು ಇದ್ದನು.


ಯೋಸೇಫನ ಗೋತ್ರದಲ್ಲಿ, ಎಫ್ರಾಯೀಮ್‌ನಿಂದ ಅಮ್ಮೀಹೂದನ ಮಗ ಎಲೀಷಾಮಾ, ಮನಸ್ಸೆ ಗೋತ್ರದಿಂದ ಪೆದಾಚೂರನ ಮಗನಾದ ಗಮಲಿಯೇಲ್,


ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”


ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಅಮ್ಮೀಹೂದನ ಮಗ ಎಲೀಷಾಮನ ಅರ್ಪಣೆಯು.


ಏಳನೆಯ ದಿನದಲ್ಲಿ ಎಫ್ರಾಯೀಮ್ ಗೋತ್ರದ ಪ್ರಧಾನನಾದ ಅಮ್ಮೀಹೂದನ ಮಗ ಎಲೀಷಾಮನು ಅರ್ಪಿಸಿದನು.


ಯೋಸೇಫನ ಮಕ್ಕಳಾದ ಎಫ್ರಾಯೀಮನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


“ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.


ಅವನ ಸೈನಿಕರ ಸಂಖ್ಯೆ 40,500 ಮಂದಿ.


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು