ಅರಣ್ಯಕಾಂಡ 2:2 - ಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರು ಒಬ್ಬೊಬ್ಬರಾಗಿ ಕುಟುಂಬಗಳ ಗುರುತುಗಳ ಪ್ರಕಾರ ತಮ್ಮ ತಮ್ಮ ದಂಡಿನ ಧ್ವಜಗಳ ಬಳಿಯಲ್ಲಿ ಇಳಿದುಕೊಳ್ಳಬೇಕು. ಅವರು ದೇವದರ್ಶನ ಗುಡಾರದ ಎದುರಿನಲ್ಲಿ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರೆಲ್ಲರೂ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನೂ ತನ್ನ ತನ್ನ ಗೋತ್ರ ಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರೆಲ್ಲರೂ ದೇವದರ್ಶನದ ಗುಡಾರದ ಸುತ್ತಲು ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನ ತನ್ನ ಗೋತ್ರಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರು ದೇವದರ್ಶನಗುಡಾರದ ಸುತ್ತಲೂ ಸ್ವಲ್ಪ ದೂರದಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನತನ್ನ ಗೋತ್ರಧ್ವಜದ ಹತ್ತಿರ ತನ್ನತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.