ಅರಣ್ಯಕಾಂಡ 2:32 - ಕನ್ನಡ ಸಮಕಾಲಿಕ ಅನುವಾದ32 ಇಸ್ರಾಯೇಲರಲ್ಲಿ ತಮ್ಮ ಕುಟುಂಬಗಳ ಪ್ರಕಾರವಾಗಿ ಎಣಿಕೆಯಾದವರು ಇವರೇ. ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ 6,03,550 ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇವರೇ ಇಸ್ರಯೇಲರಲ್ಲಿ ಗೋತ್ರಗೋತ್ರಗಳ ಪ್ರಕಾರ ಎಣಿಕೆಯಾದವರು. ಆ ದಂಡುಗಳಲ್ಲಿ ಸೈನಿಕರಾಗಿ ಎಣಿಕೆಯಾದ ಸೈನಿಕರ ಸಂಖ್ಯೆ - 6,03,500: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಸ್ರಾಯೇಲ್ಯರಲ್ಲಿ ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟವರು ಇವರೇ; ಆ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರು 603,550 ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ತಮ್ಮ ಕುಟುಂಬಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡ ಇಸ್ರೇಲರು ಇವರೇ. ಅವರ ವಿಭಾಗಗಳಿಗನುಸಾರವಾಗಿ ಪಾಳೆಯದಲ್ಲಿ ಲೆಕ್ಕಿಸಲ್ಪಟ್ಟ ಇಸ್ರೇಲರ ಸೈನಿಕರ ಸಂಖ್ಯೆ 6,03,550 ಮಂದಿ. ಅಧ್ಯಾಯವನ್ನು ನೋಡಿ |