Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:34 - ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ‍ ಪ್ರಕಾರ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು. ಹಾಗೆಯೇ ದಂಡುದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು; ಹಾಗೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಹೀಗೆ ಯೆಹೋವನು ಮೋಶೆಗೆ ಹೇಳಿದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು. ತಮ್ಮ ಕ್ರಮಕ್ಕನುಸಾರವಾಗಿ ಅವರು ಪಾಳೆಯ ಮಾಡಿಕೊಂಡರು. ನೇಮಕವಾದ ಪ್ರಕಾರವೇ ಪ್ರಯಾಣ ಮಾಡುತ್ತಿದ್ದರು; ಪ್ರತಿಯೊಬ್ಬನು ತನ್ನ ಸ್ವಂತ ಕುಲದೊಡನೆಯೂ ಕುಟುಂಬದೊಡನೆಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:34
15 ತಿಳಿವುಗಳ ಹೋಲಿಕೆ  

ನಿಮ್ಮ ಎಲ್ಲಾ ಅಪ್ಪಣೆಗಳನ್ನು ಪರಿಗಣಿಸುವಾಗ ನಾನು ನಾಚಿಕೆಗೆ ಗುರಿಯಾಗುವುದಿಲ್ಲ.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ಈ ಪ್ರಕಾರ ಇಸ್ರಾಯೇಲರು ತಮ್ಮ ಗೋತ್ರಗಳ ಪ್ರಕಾರ ಪ್ರಯಾಣವಾಗಿ ಹೊರಟರು.


“ಇಸ್ರಾಯೇಲರು ಒಬ್ಬೊಬ್ಬರಾಗಿ ಕುಟುಂಬಗಳ ಗುರುತುಗಳ ಪ್ರಕಾರ ತಮ್ಮ ತಮ್ಮ ದಂಡಿನ ಧ್ವಜಗಳ ಬಳಿಯಲ್ಲಿ ಇಳಿದುಕೊಳ್ಳಬೇಕು. ಅವರು ದೇವದರ್ಶನ ಗುಡಾರದ ಎದುರಿನಲ್ಲಿ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.”


ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಇಸ್ರಾಯೇಲರು ಈ ಕೆಲಸಗಳನ್ನೆಲ್ಲಾ ಮಾಡಿದರು.


ಇಸ್ರಾಯೇಲರು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಧ್ವಜದ ಬಳಿ ಇಳಿದುಕೊಳ್ಳಬೇಕು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲರೊಳಗೆ ಎಣಿಕೆಯಾಗಲಿಲ್ಲ.


ಯೆಹೋವ ದೇವರು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿವಸದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.


ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು