ಅರಣ್ಯಕಾಂಡ 20:13 - ಕನ್ನಡ ಸಮಕಾಲಿಕ ಅನುವಾದ13 ಇಸ್ರಾಯೇಲರು ಯೆಹೋವ ದೇವರ ಸಂಗಡ ವ್ಯಾಜ್ಯವಾಡಿದ್ದಕ್ಕಾಗಿ ದೇವರು ಅವರಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾ ಸ್ಥಳದ ನೀರು ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲರು ಅಲ್ಲಿ ಸರ್ವೇಶ್ವರನ ಸಂಗಡ ವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ‘ಮೆರೀಬಾ’ ಎಂದು ಹೆಸರಾಯಿತು. ಅಲ್ಲಿ ಸರ್ವೇಶ್ವರ ತಮ್ಮ ಪರಮ ಪಾವನತೆಯನ್ನು ವ್ಯಕ್ತಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರು ಅಲ್ಲಿ ಯೆಹೋವನ ಸಂಗಡ ವಿವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ಮೆರೀಬಾ ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಮಹಾಮಹಿಮೆಯನ್ನು ತೋರ್ಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಸ್ರೇಲರು ಅಲ್ಲಿ ಯೆಹೋವನೊಡನೆ ವಾದ ಮಾಡಿದ್ದರಿಂದ ಆ ಸ್ಥಳವು “ಮೆರೀಬಾ ಬುಗ್ಗೆ” ಎಂದು ಕರೆಯಲ್ಪಟ್ಟಿತು. ಅದಲ್ಲದೆ ಯೆಹೋವನು ತಾನು ಪರಿಶುದ್ಧನು ಎಂಬುದನ್ನು ಅವರಿಗೆ ತೋರಿಸಿದ ಸ್ಥಳವು ಇದೇ. ಅಧ್ಯಾಯವನ್ನು ನೋಡಿ |