Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:28 - ಕನ್ನಡ ಸಮಕಾಲಿಕ ಅನುವಾದ

28 ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು, ಅವನ ಮಗ ಎಲಿಯಾಜರನಿಗೆ ತೊಡಿಸಿದನು. ಆಗ ಆರೋನನು ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ, ಎಲಿಯಾಜರನೂ ಬೆಟ್ಟದಿಂದ ಇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ಬಳಿಕ ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದುಬಿಟ್ಟು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮೋಶೆಯು ಆರೋನನ ಪ್ರತಿಷ್ಠಿತಾ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕಿದನು. ಬಳಿಕ ಆರೋನನು ಬೆಟ್ಟದ ಮೇಲೆ ಸತ್ತನು. ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:28
22 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯಾಕಾನನ ಮಕ್ಕಳ ಬಾವಿಗಳ ಬಳಿಯಿಂದ ಬೇರೋತದಿಂದ ಮೋಸೇರಕ್ಕೆ ಹೊರಟಾಗ, ಆರೋನನು ಅಲ್ಲಿ ಮರಣಹೊಂದಿದನು. ಅಲ್ಲೇ ಅವನನ್ನು ಹೂಳಿಟ್ಟೆವು. ಅವನ ಮಗ ಎಲಿಯಾಜರನು ಅವನ ಬದಲಿಗೆ ಯಾಜಕನಾದನು.


ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.


ಇದಲ್ಲದೆ, ದಾವೀದನು ತನ್ನ ಮಗ ಸೊಲೊಮೋನನಿಗೆ ಸಹಾಯಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ,


ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.


ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.


ಆರೋನನ ವಸ್ತ್ರಗಳನ್ನು ತೆಗೆದು, ಅವುಗಳನ್ನು ಅವನ ಮಗ ಎಲಿಯಾಜರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು,” ಎಂದರು.


ಮೋಶೆಯು ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಮಾಡಿದನು. ಅವರು ಸಮಸ್ತ ಸಭೆಯವರು ನೋಡುತ್ತಿರುವಾಗ ಹೋರ್ ಬೆಟ್ಟವನ್ನೇರಿದರು.


ಅದನ್ನು ನೋಡಿದ ಮೇಲೆ, ನಿನ್ನ ಸಹೋದರನಾದ ಆರೋನನ ಪ್ರಕಾರ ನೀನೂ ಸಹ ನಿನ್ನ ಜನರ ಬಳಿಗೆ ಸೇರುತ್ತೀ.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.


ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


ಹಷ್ಮೋನಾದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.


ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು