Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:29 - ಕನ್ನಡ ಸಮಕಾಲಿಕ ಅನುವಾದ

29 ಆರೋನನು ತೀರಿಹೋದನೆಂದು ಸಭೆಯೆಲ್ಲಾ ನೋಡಿದಾಗ, ಇಸ್ರಾಯೇಲರೆಲ್ಲರೂ ಆರೋನನಿಗೋಸ್ಕರ ಮೂವತ್ತು ದಿವಸಗಳವರೆಗೂ ದುಃಖಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆರೋನನು ಸತ್ತುಹೋದುದನ್ನು ಇಸ್ರಯೇಲ್ ಸಮಾಜದವರೆಲ್ಲರೂ ತಿಳಿದು ಅವನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆರೋನನು ಸತ್ತುಹೋದದ್ದನ್ನು ಇಸ್ರಾಯೇಲ್ ಜನಾಂಗದವರೆಲ್ಲರೂ ತಿಳಿದು ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆರೋನನು ಸತ್ತನೆಂದು ಇಸ್ರೇಲರೆಲ್ಲರಿಗೆ ತಿಳಿಯಿತು. ಆದ್ದರಿಂದ ಇಸ್ರೇಲಿನಲ್ಲಿ ಪ್ರತಿಯೊಬ್ಬನೂ ಆರೋನನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:29
9 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಮೋವಾಬಿನ ಬಯಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ದುಃಖಿಸಿದರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಸಂತಾಪದ ದಿವಸಗಳು ಮುಗಿದವು.


ದೇವಭಕ್ತರು ಸ್ತೆಫನನ ಶವಸಂಸ್ಕಾರ ಮಾಡಿ, ಅವನಿಗಾಗಿ ಬಹಳ ಗೋಳಾಡಿದರು.


ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.


ವೈದ್ಯರು ಇಸ್ರಾಯೇಲನಿಗೆ ನಲವತ್ತು ದಿನಗಳವರೆಗೆ ಸುಗಂಧದ್ರವ್ಯಗಳ ಲೇಪನ ಮಾಡಿದರು. ಅದಕ್ಕಾಗಿ ಅಷ್ಟು ಸಮಯ ಬೇಕಾಗಿತ್ತು. ಇದಲ್ಲದೆ ಈಜಿಪ್ಟಿನವರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.


ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.


ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು