ಅರಣ್ಯಕಾಂಡ 20:5 - ಕನ್ನಡ ಸಮಕಾಲಿಕ ಅನುವಾದ5 ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವುದಕ್ಕೆ ಏಕೆ ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಕರಕೊಂಡು ಬಂದಿರಿ. ಈ ಸ್ಥಳದಲ್ಲಿ ಧಾನ್ಯವಾದರೂ ಅಂಜೂರವಾದರೂ ದ್ರಾಕ್ಷಿ ತೋಟವಾದರೂ ದಾಳಿಂಬೆ ಹಣ್ಣಾದರೂ ಇಲ್ಲ. ಕುಡಿಯುವುದಕ್ಕೆ ನೀರು ಸಹ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈಜಿಪ್ಟ್ ದೇಶದಿಂದ ನಮ್ಮನ್ನು ಬರಮಾಡಿದ್ದು ಈ ಕೀಳು ಸ್ಥಳಕ್ಕೆ ಸೇರಿಸಲಿಕ್ಕೋ? ಈ ನೆಲದಲ್ಲಿ ದವಸಧಾನ್ಯ ಬೆಳೆಯುವಂತಿಲ್ಲ; ಅಂಜೂರವಿಲ್ಲ, ದ್ರಾಕ್ಷಿಯಿಲ್ಲ, ದಾಳಿಂಬೆಯಿಲ್ಲ, ಕುಡಿಯುವುದಕ್ಕೆ ನೀರು ಕೂಡ ಇಲ್ಲ“ ಎಂದು ದೂರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಮ್ಮನ್ನು ಐಗುಪ್ತದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರಕೊಂಡು ಬಂದಿರಿ? ಈ ನೆಲದಲ್ಲಿ ಯಾವ ಧಾನ್ಯವೂ ಬೆಳೆಯುವದಿಲ್ಲ, ಮತ್ತು ಅಂಜೂರವಿಲ್ಲ, ದ್ರಾಕ್ಷೆಯಿಲ್ಲ, ದಾಳಿಂಬವಿಲ್ಲ, ಕುಡಿಯುವದಕ್ಕೆ ನೀರಾದರೂ ಇಲ್ಲ ಎಂದೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈಜಿಪ್ಟಿನಿಂದ ನಮ್ಮನ್ನು ಇಲ್ಲಿಗೆ ಯಾಕೆ ಕರೆತಂದೆ? ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ಯಾಕೆ ಕರೆದುಕೊಂಡು ಬಂದೆ? ಇಲ್ಲಿ ಧಾನ್ಯವಾಗಲಿ ಅಂಜೂರವಾಗಲಿ ದ್ರಾಕ್ಷಿಯಾಗಲಿ ದಾಳಿಂಬೆಯಾಗಲಿ ಇಲ್ಲ, ಕುಡಿಯುವುದಕ್ಕೆ ನೀರೂ ಇಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.