Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಮೋಶೆ, ಆರೋನನೂ ಜನಸಮೂಹದ ಎದುರಿನಿಂದ ದೇವದರ್ಶನ ಗುಡಾರದ ಬಾಗಿಲಿನೊಳಗೆ ಹೋಗಿ, ಸಾಷ್ಟಾಂಗವೆರಗಿದರು. ಯೆಹೋವ ದೇವರ ಮಹಿಮೆಯು ಅವರಿಗೆ ಕಾಣಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆ ಮತ್ತು ಆರೋನರು ಆ ಜನ ಸಂದಣಿಯನ್ನು ಬಿಟ್ಟು, ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಬಂದು ಸಾಷ್ಟಾಂಗವೆರಗಿದರು. ಆಗ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಲಿಗೆ ಹೋಗಿ ಅಡ್ಡಬೀಳಲಾಗಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೋಶೆ ಆರೋನರು ಜನಸಮೂಹದ ಎದುರಿನಿಂದ ದೇವದರ್ಶನಗುಡಾರದ ಪ್ರವೇಶದ್ವಾರಕ್ಕೆ ಹೋಗಿ ಅಡ್ಡಬಿದ್ದರು. ಆಗ ಯೆಹೋವನ ಮಹಿಮೆಯು ಅವರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:6
15 ತಿಳಿವುಗಳ ಹೋಲಿಕೆ  

ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.


“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.


ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.


ಮೋಶೆಯು ಇದನ್ನು ಕೇಳಿದಾಗ, ಬೋರಲು ಬಿದ್ದು,


ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಜನರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ, ಅವರು ದೇವದರ್ಶನ ಗುಡಾರದ ಕಡೆಗೆ ನೋಡಲಾಗಿ, ಮೇಘವು ಅದನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ಕಾಣಬಂತು.


ಆಗ ಸಭೆಯವರೆಲ್ಲರೂ ಅವರಿಗೆ ಕಲ್ಲೆಸೆಯಬೇಕೆಂದಿದ್ದರು. ಯೆಹೋವ ದೇವರ ಮಹಿಮೆಯು ದೇವದರ್ಶನ ಗುಡಾರದಲ್ಲಿ ಇಸ್ರಾಯೇಲರಿಗೆಲ್ಲಾ ಪ್ರತ್ಯಕ್ಷವಾಯಿತು.


ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.


ಆಗ ಮೋಶೆಯು ಯೆಹೋವ ದೇವರಿಗೆ ಮೊರೆಯಿಟ್ಟು, “ಈ ಜನರಿಗೆ ನಾನೇನು ಮಾಡಲಿ? ಅವರು ಬಹಳಮಟ್ಟಿಗೆ ನನಗೆ ಕಲ್ಲೆಸೆಯುವುದಕ್ಕಿದ್ದಾರೆ,” ಎಂದನು.


ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.


ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು