Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:8 - ಕನ್ನಡ ಸಮಕಾಲಿಕ ಅನುವಾದ

8 “ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭೆಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:8
31 ತಿಳಿವುಗಳ ಹೋಲಿಕೆ  

ಆದರೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಳ್ಳಬೇಕು. ಇದರಿಂದಲೇ ನೀನು ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಕಾಡುಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆಯ್ದುಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ.


ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.


ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.


ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.


ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.”


ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.


ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗು. ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು,” ಎಂದನು.


ನೀನು ನಿನ್ನ ಕೋಲನ್ನು ಎತ್ತಿ, ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚಿ, ಅದನ್ನು ವಿಭಾಗಿಸು. ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.


ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಫರೋಹನ ಮುಂದೆಯೂ, ಅವನ ಸೇವಕರ ಮುಂದೆಯೂ ಹೊಡೆದನು. ಆಗ ನದಿಯಲ್ಲಿದ್ದ ನೀರೆಲ್ಲಾ ರಕ್ತವಾಯಿತು.


ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರೆದುಕೊಂಡು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ, ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಬಂದನು. ಇದಲ್ಲದೆ ದೇವರ ಕೋಲನ್ನು ಕೈಯಲ್ಲಿ ತೆಗೆದುಕೊಂಡನು.


ಯೆಹೋವ ದೇವರು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು. ಅವನು, “ಕೋಲು,” ಎಂದನು.


ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.


ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು