ಅರಣ್ಯಕಾಂಡ 21:13 - ಕನ್ನಡ ಸಮಕಾಲಿಕ ಅನುವಾದ13 ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ಹೊಳೆ ಅಮೋರಿಯರ ಪ್ರದೇಶದಿಂದಾಚೆ ಇರುವ ಮರುಭೂಮಿಯಲ್ಲಿ ಮೋವಾಬ್ಯರಿಗೂ ಅಮೋರಿಯರಿಗೂ ನಡುವೆ ಇದ್ದು ಮೋಬಾಬ್ಯರ ಎಲ್ಲೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೇ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ಹೊಳೆಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಮೇರೆಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರು ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆ ಕಡೆಯಲ್ಲಿ ಅಂದರೆ ಅಮೋರಿಯರ ಪ್ರದೇಶದೊಳಗೆ ವಿಸ್ತರಿಸಿರುವ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು. ಅರ್ನೋನ್ ನದಿಯು ಮೋವಾಬ್ಯರಿಗೂ ಅಮೋರಿಯರಿಗೂ ಗಡಿಯಾಗಿದೆ. ಅಧ್ಯಾಯವನ್ನು ನೋಡಿ |