Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಇಸ್ರಾಯೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕು, ಜನರೇ, ಅದರ ಬಗ್ಗೆ ನೀವು ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಕಾಲದಲ್ಲಿ ಇಸ್ರಯೇಲರು ಹಾಡಿದ ಗೀತೆ ಇದು: ಬಾವಿಯೇ, ಎದ್ದು ಬಾ ಉಕ್ಕುತ್ತಾ ಜನರೇ, ಹಾಡಿ ಹಿಗ್ಗುತ್ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಕಾಲದಲ್ಲಿ ಇಸ್ರಾಯೇಲ್ಯರು ಈ ಹಾಡನ್ನು ಗಾನಮಾಡಿದರು; ಏನೆಂದರೆ - ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಇಸ್ರೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಅದರ ಕುರಿತು ಹಾಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:17
8 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.


ಯೆಹೋವ ದೇವರಿಗೆ ಹಾಡಿರಿ. ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ. ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.


ಆಗ ಅವರು ದೇವರ ಮಾತುಗಳನ್ನು ನಂಬಿ, ದೇವರಿಗೆ ಸ್ತೋತ್ರವನ್ನು ಹಾಡಿದರು.


ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ; ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.


ಆ ದಿವಸದಲ್ಲಿ ದೆಬೋರಳೂ, ಅಬೀನೋವಮನ ಮಗ ಬಾರಾಕನೂ ಹಾಡಿದ್ದೇನೆಂದರೆ:


ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು