Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸ್ರೇಲರು ಸಂದೇಶಕರನ್ನು ಅಮೋರಿಯರ ಅರಸನಾದ ಸೀಹೋನನ ಬಳಿಗೆ ಕಳುಹಿಸಿದರು. ಅವರು ಅರಸನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:21
16 ತಿಳಿವುಗಳ ಹೋಲಿಕೆ  

ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.


ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದ ಮೇಲೆಯೂ, ಅಷ್ಟಾರೋತ್‌ನಲ್ಲಿ, ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಎದ್ರೈಯಲ್ಲಿ ಸೋಲಿಸಿದ ಮೇಲೆಯೂ ಮೋಶೆ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿದನು.


ಯೊರ್ದನ್ ನದಿಯ ಆಚೆಯಲ್ಲಿ ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಅವನನ್ನು ಮೋಶೆಯೂ, ಇಸ್ರಾಯೇಲರೂ ಈಜಿಪ್ಟಿನೊಳಗಿಂದ ಹೊರಟ ಮೇಲೆ ಸೋಲಿಸಿದರು.


ನೀವು ಈ ಸ್ಥಳಕ್ಕೆ ಬಂದಾಗ, ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಹೊರಟರು. ನಾವು ಅವರನ್ನು ಸೋಲಿಸಿ,


ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.


“ ‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.


ಯೆಹೋವ ದೇವರು ಇಸ್ರಾಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ,


“ನೀವು ಅವರಿಗೆ ರಾಜ್ಯಗಳನ್ನೂ, ಜನಾಂಗಗಳನ್ನೂ ವಶಪಡಿಸಿದಿರಿ. ಅವರಿಗೆ ಮೇರೆಗಳನ್ನು ವಿಭಾಗಿಸಿ ಕೊಟ್ಟಿರಿ. ಆಗ ಅವರು, ಹೆಷ್ಬೋನಿನ ಅರಸನಾದ ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಸ್ವಾಧೀನಮಾಡಿಕೊಂಡರು.


ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು.


ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


“ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ, ಸೀಹೋನನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ, ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವುದು.


ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ:


ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು