Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಸೀಹೋನನು ತನ್ನ ನಾಡನ್ನು ದಾಟುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡಲಿಲ್ಲ. ಬದಲಿಗೆ ಅವರನ್ನು ಎದುರಿಸಲು ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಮರುಭೂಮಿಗೆ ಹೊರಟು, ಯಹಚಕ್ಕೆ ಬಂದು, ಅವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ತನ್ನ ಸೀಮೆಯನ್ನು ದಾಟಿಹೋಗುವದಕ್ಕೆ ಸೀಹೋನನು ಇಸ್ರಾಯೇಲ್ಯರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವದಕ್ಕೆ ಅರಣ್ಯಕ್ಕೆ ಹೊರಟು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:23
11 ತಿಳಿವುಗಳ ಹೋಲಿಕೆ  

ಆದರೆ ಸೀಹೋನನು ತನ್ನ ಮೇರೆಯನ್ನು ದಾಟುವುದಕ್ಕೆ ಇಸ್ರಾಯೇಲರನ್ನು ನಂಬದೆ, ತನ್ನ ಜನರನ್ನೆಲ್ಲಾ ಕೂಡಿಸಿ, ಯಹಚಿನಲ್ಲಿ ದಂಡಿಳಿದು, ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡಿದನು.


“ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಲೆಯವರೆಗೂ, ಯಹಚಿನವರೆಗೂ, ಚೋಗರ್ ಮೊದಲ್ಗೊಂಡು ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಮೂರು ವರ್ಷದ ಕಡಸಿನಂತೆ ತಮ್ಮ ಶಬ್ದವನ್ನೆತ್ತಿದ್ದರು; ಏಕೆಂದರೆ ನಿಮ್ರೀಮ್‌ನ ನೀರು ಸಹ ಹಾಳಾದವು.


ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಅವರ ಸ್ವರವು ಯಹಚ ಊರಿನವರೆಗೂ ಕೇಳಿಸುತ್ತದೆ. ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು. ಅವರ ಹೃದಯಗಳು ತತ್ತರಿಸುತ್ತವೆ.


ಈ ಪ್ರಕಾರ ಎದೋಮ್ಯನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ. ಆದಕಾರಣ ಇಸ್ರಾಯೇಲರು ಅವನ ಕಡೆಯಿಂದ ತಿರುಗಿಕೊಂಡು ಹೊರಟು ಹೋದರು.


ಯಹಚ, ಕೆದೇಮೋತ್, ಮೇಫಾತ್,


ಇದಲ್ಲದೆ ಬಯಲುಸೀಮೆಯ ಮೇಲೆ ನ್ಯಾಯ ತೀರ್ವಿಕೆ ಬಂತು; ಹೋಲೋನ್, ಯಹಚ, ಮೇಫಾತ್,


“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.


ಎದೋಮ್ಯರು ದೂತರಿಗೆ, “ನೀನು ಈ ಕಡೆಯಲ್ಲಿ ದಾಟಿ ಹೋಗಬೇಡ. ಹೋದರೆ ನಾನು ಖಡ್ಗದಿಂದ ನಿನ್ನ ಮೇಲೆ ದಾಳಿಗೆ ಬರುವೆನು,” ಎಂದನು.


ಯೊರ್ದನ್ ನದಿಯ ಆಚೆಯಲ್ಲಿ ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಅವನನ್ನು ಮೋಶೆಯೂ, ಇಸ್ರಾಯೇಲರೂ ಈಜಿಪ್ಟಿನೊಳಗಿಂದ ಹೊರಟ ಮೇಲೆ ಸೋಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು