ಅರಣ್ಯಕಾಂಡ 21:24 - ಕನ್ನಡ ಸಮಕಾಲಿಕ ಅನುವಾದ24 ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇಸ್ರಯೇಲರು ಅವನ ಜನರನ್ನು ಸೋಲಿಸಿದರು, ಕತ್ತಿಯಿಂದ ಸಂಹರಿಸಿದರು. ಅರ್ನೋನ್ ಹೊಳೆಯಿಂದ ಯಬ್ಬೋಕ್ ಹೊಳೆಯವರೆಗೂ ಹಾಗೂ ಅಮ್ಮೋನಿಯರ ಎಲ್ಲೆಯವರೆಗೂ ಇದ್ದ ಸೀಹೋನನ ನಾಡನ್ನೆಲ್ಲಾ ಸ್ವಾಧೀನ ಮಾಡಿಕೊಂಡರು. ಅಮ್ಮೋನಿಯರ ಎಲ್ಲೆ ಒಂದು ದುರ್ಗವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರು ಅವನ ಜನರನ್ನು ಸೋಲಿಸಿ ಕತ್ತಿಯಿಂದ ಸಂಹರಿಸಿ ಅರ್ನೋನ್‍ಹೊಳೆ ಮೊದಲುಗೊಂಡು ಯಬ್ಬೋಕ್ ಹೊಳೆಯವರೆಗೂ ಅಮ್ಮೋನಿಯರ ಮೇರೆಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಅಮ್ಮೋನಿಯರ ಮೇರೆ ಬಲವುಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ಇಸ್ರೇಲರು ಅರಸನನ್ನು ಕೊಂದುಹಾಕಿದರು. ಬಳಿಕ ಅವರು ಅರ್ನೋನ್ ನದಿಯಿಂದ ಹಿಡಿದು ಯಬ್ಬೋಕ್ ನದಿಯವರೆಗಿರುವ ಅವನ ಭೂಮಿಯನ್ನು ವಶಪಡಿಸಿಕೊಂಡರು. ಅವರು ಅಮ್ಮೋನಿಯರ ಮೇರೆಯವರೆಗಿರುವ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡರು. ಅಮ್ಮೋನಿಯರು ತಮ್ಮ ಗಡಿಯನ್ನು ಭದ್ರವಾಗಿ ರಕ್ಷಿಸಿಕೊಂಡದ್ದರಿಂದ ಇಸ್ರೇಲರು ಮುಂದಕ್ಕೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿ |
“ ‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.