ಅರಣ್ಯಕಾಂಡ 21:25 - ಕನ್ನಡ ಸಮಕಾಲಿಕ ಅನುವಾದ25 ಇಸ್ರಾಯೇಲರು ಆ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಇಸ್ರಾಯೇಲರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇಸ್ರಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಹೆಷ್ಬೋನಿನಲ್ಲೂ ಅದಕ್ಕೆ ಸೇರಿದ ಗ್ರಾಮಗಳಲ್ಲೂ ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲೂ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇಸ್ರಾಯೇಲ್ಯರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಸ್ರೇಲರು ಅಮೋರಿಯರ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡು ಅವುಗಳಲ್ಲಿ ವಾಸಿಸಿದರು. ಅವರು ಹೆಷ್ಬೋನನ್ನು ಮತ್ತು ಅದರ ಸುತ್ತಲಿರುವ ಎಲ್ಲಾ ಚಿಕ್ಕ ಪಟ್ಟಣಗಳನ್ನು ಸಹ ವಶಪಡಿಸಿಕೊಂಡರು. ಅಧ್ಯಾಯವನ್ನು ನೋಡಿ |
“ ‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.