Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:27 - ಕನ್ನಡ ಸಮಕಾಲಿಕ ಅನುವಾದ

27 ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಈ ವಿಷಯವಾಗಿಯೇ ಕವಿಗಳು ಹೀಗೆಂದು ಹಾಡಿದ್ದಾರೆ: ಹೆಷ್ಬೋನಿಗೆ ಬನ್ನಿ, ಕಟ್ಟಿ ಅದನ್ನು ಪುನಃ ಮತ್ತೆ ಸ್ಥಾಪನೆ ಆಗಲಿ ಸೀಹೋನನಾ ಪಟ್ಟಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕವಿಗಳು ಹೇಳಿದ ಪದ್ಯವು ಇದರ ವಿಷಯವಾದದ್ದೇ; ಅದೇನಂದರೆ - ಹೆಷ್ಬೋನಿಗೆ ಬಂದು ಅದನ್ನು [ಹೊಸತಾಗಿ] ಕಟ್ಟಬೇಕು; ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದಕಾರಣ ಹಾಡುವವರು ಈ ಗೀತೆಯನ್ನು ಹಾಡುತ್ತಾರೆ: “ಹೆಷ್ಬೋನಿಗೆ, ಬಾ! ಮತ್ತೆ ಅದನ್ನು ನಿರ್ಮಿಸು! ಸೀಹೋನನ ಪಟ್ಟಣವನ್ನು ಮತ್ತೆ ಸ್ಥಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:27
6 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. ಇದೆಷ್ಟರವರೆಗೆ ಮುಂದುವರಿಯಬೇಕು?


ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬಿಲೋನಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: ಹೀಗೆ ದಬ್ಬಾಳಿಕೆಗಾರನು ಕೊನೆಗೊಂಡನು. ಅವನ ಕೋಪ ಹೀಗೆ ಮುಗಿಯಿತು.


ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್


ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು.


“ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.


ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು