Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:30 - ಕನ್ನಡ ಸಮಕಾಲಿಕ ಅನುವಾದ

30 “ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿನವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ನಾವು ಆ ಅಮೋರಿಯರನ್ನು ಸೋಲಿಸಿದೆವು. ಹೆಷ್ಬೋನಿನಿಂದ ದೀಬೋನಿನವರೆಗಿರುವ ಅವರ ಪಟ್ಟಣಗಳನ್ನೂ ನಾಶೀಮಿನಿಂದ ನೋಫಹದ (ಮೇದೆಬಾದ ಹತ್ತಿರ) ವರೆಗಿರುವ ಪಟ್ಟಣಗಳನ್ನೂ ನಾವು ನಾಶಮಾಡಿದೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:30
13 ತಿಳಿವುಗಳ ಹೋಲಿಕೆ  

“ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ಒಣಭೂಮಿಯ ಬಾಯಾರಿದವಳಂತೆ ಕೂತುಕೋ, ಏಕೆಂದರೆ ಮೋವಾಬನ್ನು ವಿನಾಶ ಮಾಡುವವನು ನಿನ್ನ ಮೇಲೆ ಬರುವನು; ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿಬಿಡುವನು.


ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.


ದೀಬೋನ್, ನೆಬೋ, ಬೇತ್ ದಿಬ್ಲಾತಯಿಮ್,


ಸಮನಾದ ಭೂಮಿಯಲ್ಲಿರುವ ಹೆಷ್ಬೋನ್ ಪಟ್ಟಣವೂ ಅದರ ಎಲ್ಲಾ ಪಟ್ಟಣಗಳಾದ ದೀಬೋನ್, ಬಾಮೋತ್ ಬಾಳ್, ಬೇತ್ ಬಾಳ್ ಮೆಯೋನ್,


ಗಾದನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್,


“ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,


ದೀಮೋನ್ ನದಿಯ ನೀರೆಲ್ಲಾ ರಕ್ತವಾಯಿತು. ದೀಮೋನಿನ ಮೇಲೆ ಹೆಚ್ಚಾದ ಹಾನಿಯನ್ನು ತರುವೆನು. ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.


ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.


ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು.


ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು. ವಿರೋಧದಿಂದ ಅವನ ಮೇಲೆ ಬಾಣಗಳನ್ನು ಎಸೆಯುವರು.


ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು.


ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ, ಮಾಕದ ಅರಸನನ್ನೂ, ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಊರಿನ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋನಿಯರು ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು