Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:34 - ಕನ್ನಡ ಸಮಕಾಲಿಕ ಅನುವಾದ

34 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನು ಮೋಶೆಗೆ - ಅವನಿಗೆ ಭಯಪಡಬೇಡ; ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನಗೆ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:34
24 ತಿಳಿವುಗಳ ಹೋಲಿಕೆ  

ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಡುವರು.


ನೀನಂತೂ ಹೆದರಬೇಡ; ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ, ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!


ಇದಲ್ಲದೆ ಇದು ಯೆಹೋವ ದೇವರ ದೃಷ್ಟಿಗೆ ಅಲ್ಪವಾಗಿರುವುದು. ಅವರು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವರು.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.


ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ,


ಆಗ ಯೆಹೋಶುವನು ಅವರಿಗೆ, “ಭಯಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರಿ. ಏಕೆಂದರೆ ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಯೆಹೋವ ದೇವರು ಹೀಗೆಯೇ ಮಾಡುವರು,” ಎಂದನು.


ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.


ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ.”


“ಇಸ್ರಾಯೇಲರೇ ಕೇಳಿರಿ, ನೀವು ಈ ಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸಮೀಪ ಬಂದಿದ್ದೀರಿ. ನಿಮ್ಮ ಹೃದಯಗಳು ಕುಗ್ಗಬಾರದು. ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂ ಬೇಡಿರಿ.


ದೇವರು ಅವರ ಅರಸರನ್ನು ನಿಮಗೆ ಒಪ್ಪಿಸುವರು. ನೀವು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ದಂಡಿಸುವಿರಿ. ನೀವು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿಮ್ಮ ಮುಂದೆ ನಿಲ್ಲಲಾರನು.


ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.


ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.


ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು.


ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.


ಆಗ ನಾವು ಹಿಂದಿರುಗಿ ಬಾಷಾನಿನ ಕಡೆಗೆ ಮೇಲಕ್ಕೆ ಹೊರಟೆವು. ಆಗ ಬಾಷಾನಿನ ಅರಸನಾದ ಓಗನು ತನ್ನ ಸಮಸ್ತ ಜನರ ಸಂಗಡ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈಗೆ ಹೊರಟುಬಂದನು.


“ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ?


ನೀವು ಅವರಿಗೆ ಭಯಪಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಫರೋಹನಿಗೂ, ಎಲ್ಲಾ ಈಜಿಪ್ಟಿನವರಿಗೂ ಮಾಡಿದ್ದನ್ನು


ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು