ಅರಣ್ಯಕಾಂಡ 21:4 - ಕನ್ನಡ ಸಮಕಾಲಿಕ ಅನುವಾದ4 ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್ಯರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡುಹೋಗುವದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುತ್ತಿರಲು ಮಾರ್ಗಾಯಾಸದಿಂದ ಅವರಿಗೆ ಬೇಸರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು. ಅಧ್ಯಾಯವನ್ನು ನೋಡಿ |