ಅರಣ್ಯಕಾಂಡ 21:5 - ಕನ್ನಡ ಸಮಕಾಲಿಕ ಅನುವಾದ5 ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ, “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.