Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:13 - ಕನ್ನಡ ಸಮಕಾಲಿಕ ಅನುವಾದ

13 ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ, “ನಿಮ್ಮ ದೇಶಕ್ಕೆ ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬೆಳಿಗ್ಗೆ ಬಿಳಾಮನು ಬಾಲಾಕನ ಮುಖಂಡರಿಗೆ, “ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಸರ್ವೇಶ್ವರನ ಅಪ್ಪಣೆಯಿಲ್ಲ. ನೀವು ನಿಮ್ಮ ನಾಡಿಗೆ ತೆರಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೆಳಿಗ್ಗೆ ಬಿಳಾಮನು ಬಾಲಾಕನ ಪ್ರಧಾನರಿಗೆ - ನಾನು ನಿಮ್ಮ ಜೊತೆಯಲ್ಲಿ ಬರುವದಕ್ಕೆ ಯೆಹೋವನ ಅಪ್ಪಣೆಯಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮರುದಿನ ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಹಿರಿಯರಿಗೆ, “ನಿಮ್ಮ ಸ್ವಂತ ದೇಶಕ್ಕೆ ಹಿಂದಕ್ಕೆ ಹೋಗಿರಿ. ನಿಮ್ಮ ಸಂಗಡ ಬರಲು ಯೆಹೋವನು ನನಗೆ ಅಪ್ಪಣೆ ಕೊಡುತ್ತಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:13
3 ತಿಳಿವುಗಳ ಹೋಲಿಕೆ  

ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.


ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು.


ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು