Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:16 - ಕನ್ನಡ ಸಮಕಾಲಿಕ ಅನುವಾದ

16 ಅವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವರು ಬಿಳಾಮನ ಬಳಿಗೆ ಬಂದು, “ಚಿಪ್ಪೋರನ ಮಗ ಬಾಲಾಕನು ತಮಗೆ ತಿಳಿಸುವುದು ಇದು: ‘ತಾವು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಯನ್ನು ಒಡ್ಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ - ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆನ್ನುತ್ತಾನೆ: ನೀನು ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:16
5 ತಿಳಿವುಗಳ ಹೋಲಿಕೆ  

ಆದರೆ ಬಾಲಾಕನು ತಿರುಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಧಾನರನ್ನು ಕಳುಹಿಸಿದನು.


ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.


ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು