Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:17 - ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ; ನೀನು ಅಗತ್ಯವಾಗಿ ಬಂದು ಈ ಜನವನ್ನು ನನಗೋಸ್ಕರ ಶಪಿಸಬೇಕೆಂದು ಚಿಪ್ಪೋರನ ಮಗನಾದ ಬಾಲಾಕನು ಹೇಳುತ್ತಾನೆಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಈ ಜನರನ್ನು ಶಪಿಸು” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:17
12 ತಿಳಿವುಗಳ ಹೋಲಿಕೆ  

ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು.


ಆಗ ರಾಜಕಂಚುಕಿಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ ಬಂದು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಮಾತಾಡಿದ ಮೊರ್ದೆಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಮಾಡಿಸಿದ ಇಪ್ಪತ್ತೆರಡು ಮೀಟರ್ ಗಲ್ಲುಮರವು ಹಾಮಾನನ ಮನೆಯ ಹತ್ತಿರ ಇದೆ,” ಎಂದನು. ಅದಕ್ಕೆ ಅರಸನು, “ಇವನನ್ನು ಅದರಲ್ಲಿ ನೇತುಹಾಕಿರಿ” ಎಂದನು.


ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.


ಏಳು ವಾರಗಳನ್ನು ನನಗಾಗಿ ಎಣಿಸಿಕೊಳ್ಳಬೇಕು. ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವುದಕ್ಕೆ ಪ್ರಾರಂಭಿಸಬೇಕು.


ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು.


ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.


ಅವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು