Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:18 - ಕನ್ನಡ ಸಮಕಾಲಿಕ ಅನುವಾದ

18 ಬಿಳಾಮನು ಪ್ರತ್ಯುತ್ತರವಾಗಿ ಬಾಲಾಕನ ಸೇವಕರಿಗೆ, “ಬಾಲಾಕನು ನನಗೆ ತನ್ನ ಮನೆ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾಗಿರುವ ಯೆಹೋವ ದೇವರ ಮಾತನ್ನು ಮೀರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಬಿಳಾಮನು, “ಬಾಲಾಕನು ತನ್ನ ಮನೆ ತುಂಬ ಬೆಳ್ಳಿ ಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಚಿಕ್ಕದಾಗಿರಲಿ ದೊಡ್ಡದಾಗಿರಲಿ ಉಲ್ಲಂಘಿಸಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಬಿಳಾಮನು - ಬಾಲಾಕನು ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಿಳಾಮನು ಬಾಲಾಕನ ಅಧಿಕಾರಿಗಳಿಗೆ, “ಬಾಲಾಕನು ನನಗೆ ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನನ್ನ ದೇವರಾದ ಯೆಹೋವನ ಆಜ್ಞೆಗೆ ವಿರೋಧವಾಗಿ ನಾನೇನೂ ಮಾಡಲು ಸಾಧ್ಯವಿಲ್ಲ. ಯೆಹೋವನು ಅಪ್ಪಣೆ ಕೊಡದ ಹೊರತು ನಾನು ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ಮಾಡಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:18
14 ತಿಳಿವುಗಳ ಹೋಲಿಕೆ  

‘ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ, ನನ್ನ ಹೃದಯದಿಂದ ಒಳ್ಳೆಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡುವುದಕ್ಕೆ ಯೆಹೋವ ದೇವರ ಆಜ್ಞೆಯನ್ನು ಮೀರಲಾರೆನು. ಯೆಹೋವ ದೇವರು ಏನು ಹೇಳುತ್ತಾರೋ, ಅದನ್ನೇ ಹೇಳುವೆನೆಂದು ನಾನು ಹೇಳಲಿಲ್ಲವೋ’? ಈಗ, ನನ್ನ ಜನರ ಬಳಿಗೆ ಹೋಗುತ್ತೇನೆ.


ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.


ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.


ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು.


ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು!


ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.


ಆದರೆ ಈಗ ಯೆಹೋವ ದೇವರು ನನಗೆ ಮತ್ತೇನು ಹೇಳುವರೆಂದು ನಾನು ತಿಳಿದುಕೊಳ್ಳುವ ಹಾಗೆ, ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ,” ಎಂದನು.


ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ,


ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ.


ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.


ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.


ಬಂಗಾರವನ್ನು ಕೂಡಿಸಿಟ್ಟು, ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡ ವಿಶ್ರಮಿಸಿಕೊಳ್ಳುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು