Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:23 - ಕನ್ನಡ ಸಮಕಾಲಿಕ ಅನುವಾದ

23 ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನ ದೂತನು ಬಿಚ್ಚುಗತ್ತಿಯನ್ನು ಕೈಯಲ್ಲಿ ಹಿಡಿದು ದಾರಿಯಲ್ಲೇ ನಿಂತನು. ಇದನ್ನು ಕಂಡ ಆ ಕತ್ತೆ ದಾರಿಯನ್ನು ಬಿಟ್ಟು ಅಡವಿಯ ಕಡೆಹೋಯಿತು. ದಾರಿಗೆ ತಿರುಗಿಸಲು ಬಿಳಾಮನು ಅದನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಕಡೆ ಹೋಯಿತು; ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನ ದೂತನು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಬಯಲಿನ ಕಡೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವದಕ್ಕೆ ಬಿಳಾಮನು ಅದನ್ನು ಹೊಡೆದನು. ಅವನಿಗೆ ದೂತನು ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:23
11 ತಿಳಿವುಗಳ ಹೋಲಿಕೆ  

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಆದರೆ ಅವನ ದುಷ್ಟತನಕ್ಕೆ ಖಂಡನೆಯಾಯಿತು. ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.


ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರು. ಆದರೆ ನನ್ನ ಕೂಡ ಮಾತನಾಡುತ್ತಿದ್ದ ಸ್ವರವು ಅವರಿಗೆ ಕೇಳಿಸಲಿಲ್ಲ.


ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು.


ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


ಆಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.


ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.


ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು.


ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು